Genesis 24:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೇವಕನು, “ಯೆಹೋವನೇ, ನೀನು ನನ್ನ ಒಡೆಯನಾದ ಅಬ್ರಹಾಮನ ದೇವರು. ಈ ದಿನ ಅವನ ಮಗನಿಗಾಗಿ ಕನ್ಯೆಯನ್ನು ಕಂಡುಕೊಳ್ಳಲು ಸಹಾಯಮಾಡು. ನನ್ನ ಒಡೆಯನಾದ ಅಬ್ರಹಾಮನಿಗೋಸ್ಕರವಾಗಿಯೇ ಈ ಉಪಕಾರ ಮಾಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.
Kannada BSI Bible 2016
ಆಗ ಅವನು--ನನ್ನ ಯಜಮಾನನಾದ ಅಬ್ರಹಾ ಮನ ದೇವರಾಗಿರುವ ಕರ್ತನೇ, ಈಹೊತ್ತು ನನಗೆ ತ್ವರೆಯಾಗಿ ಕಾರ್ಯಕೈಗೂಡುವಂತೆ ಮಾಡಿ ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಅನುಕೂಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಬೇಡುತ್ತೇನೆ.
Kannada Bible (KNCL) BSI 2016
“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.