Genesis 24:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೇವಕನು ಪ್ರಾರ್ಥನೆ ಮಾಡಿ ಮುಗಿಸುವುದಕ್ಕಿಂತ ಮೊದಲೇ ರೆಬೆಕ್ಕ ಎಂಬ ಯುವತಿಯು ಬಾವಿಯ ಬಳಿಗೆ ಬಂದಳು. ರೆಬೆಕ್ಕಳು ಬೆತೂವೇಲನ ಮಗಳು. ಬೆತೂವೇಲನು ಮಿಲ್ಕಳ ಮತ್ತು ನಾಹೋರನ ಮಗನು. ನಾಹೋರನು ಅಬ್ರಹಾಮನ ತಮ್ಮ. ರೆಬೆಕ್ಕಳು ತನ್ನ ಹೆಗಲ ಮೇಲೆ ನೀರಿನ ಕೊಡವನ್ನು ತೆಗೆದುಕೊಂಡು ಬಾವಿಗೆ ಬಂದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು.
Kannada BSI Bible 2016
ಅವನು ಹಾಗೆ ಹೇಳುವದನ್ನು ಮುಗಿಸುವದಕ್ಕಿಂತ ಮುಂಚೆ ಆದದ್ದೇನಂದರೆ, ಇಗೋ, ಅಬ್ರಹಾಮನ ಸಹೋದರ ನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲಿಟ್ಟುಕೊಂಡು ಹೊರಗೆ ಬಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ವಿುಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವದನ್ನು ಕಂಡನು.
Kannada Bible (KNCL) BSI 2016
ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಹಾಗೆ ಹೇಳುವುದನ್ನು ಮುಗಿಸುವುದಕ್ಕಿಂತ ಮುಂಚೆ ಅಬ್ರಹಾಮನ ಸಹೋದರನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಾಳ ಮಗ ಬೆತೂಯೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲೆ ಇಟ್ಟುಕೊಂಡು ಹೊರಗೆ ಬಂದಳು.