Genesis 24:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆ ಬಹು ಸುಂದರಿಯಾಗಿಯೂ ಕನ್ನಿಕೆಯಾಗಿಯೂ ಇದ್ದಳು. ಆಕೆ ಬಾವಿಯ ಬಳಿಗೆ ಹೋಗಿ ಕೊಡದಲ್ಲಿ ನೀರನ್ನು ತುಂಬಿಸಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.
Kannada BSI Bible 2016
ಆ ಹುಡುಗಿಯು ನೋಡುವದಕ್ಕೆ ಬಹು ಸುಂದರಿಯಾಗಿದ್ದು ಯಾವ ಮನುಷ್ಯನು ಅರಿಯದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಗೆ ಇಳಿದುಹೋಗಿ ತನ್ನ ಕೊಡವನ್ನು ತುಂಬಿಕೊಂಡು ಮೇಲೆ ಬಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹುಡುಗಿ ಬಹು ಸುಂದರಿಯಾಗಿಯೂ ಇನ್ನೂ ಮದುವೆಯಿಲ್ಲದ ಕನ್ನಿಕೆಯಾಗಿಯೂ ಇದ್ದಳು. ಆಕೆ ಬುಗ್ಗೆಯ ಬಳಿಗೆ ಇಳಿದು ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ
Kannada Bible (KNCL) BSI 2016
ಬಲು ಚೆಲುವೆ; ಯಾವ ಪುರುಷನ ಸಂಸರ್ಗವೂ ಇಲ್ಲದ ಕನ್ನಿಕೆ, ಬುಗ್ಗೆಯ ಬಳಿಗೆ ಇಳಿದು ಕೊಡದಲ್ಲಿ ನೀರು ತುಂಬಿಸಿಕೊಂಡು ಮೇಲಕ್ಕೆ ಬಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹುಡುಗಿಯು ನೋಡುವುದಕ್ಕೆ ಬಹು ಸುಂದರಿಯಾಗಿದ್ದಳು, ಮದುವೆಯಾಗದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಯ ಬಳಿಗೆ ಹೋಗಿ, ತನ್ನ ಕೊಡವನ್ನು ತುಂಬಿಕೊಂಡು ಬಂದಳು.