Genesis 24:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆ ಸೇವಕನು ಅವಳ ಬಳಿಗೆ ಓಡಿಹೋಗಿ, “ದಯವಿಟ್ಟು ಕುಡಿಯಲು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕೊಡು” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆ ಬುಗ್ಗೆಯ ಬಳಿಗೆ ಹೋಗಿ ಕೊಡದಲ್ಲಿ ನೀರು ತುಂಬಿಕೊಂಡು ಮೇಲಕ್ಕೆ ಬಂದಾಗ ಆ ಸೇವಕನು ಓಡಿಬಂದು ಎದುರುಗೊಂಡು, “ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು” ಎಂದು ಕೇಳಿಕೊಳ್ಳಲು ಆಕೆಯು.
Kannada BSI Bible 2016
ಆಗ ಆ ಸೇವಕನು ಅವಳೆದುರಿಗೆ ಓಡಿಹೋಗಿ--ನಿನ್ನ ಕೊಡದೊಳಗಿನಿಂದ ಸ್ವಲ್ಪ ನೀರು ನನಗೆ ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸೇವಕನು ಓಡಿಬಂದು ಎದುರುಗೊಂಡು - ಅಮ್ಮಾ, ದಯಮಾಡಿ ನಿನ್ನ ಕೊಡದಿಂದ ನನಗೆ ಸ್ವಲ್ಪ ನೀರನ್ನು ಕುಡಿಯುವದಕ್ಕೆ ಕೊಡು ಎಂದು ಕೇಳಿಕೊಳ್ಳಲು
Kannada Bible (KNCL) BSI 2016
ಆ ಸೇವಕನು ಅವಳಿಗೆದುರಾಗಿ ಓಡಿಬಂದು, “ಅಮ್ಮಾ, ದಯಮಾಡಿ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು,” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೇವಕನು ಅವಳೆದುರಿಗೆ ಓಡಿಹೋಗಿ, “ನಿನ್ನ ಕೊಡದೊಳಗಿಂದ ಸ್ವಲ್ಪ ನೀರು ನನಗೆ ಕುಡಿಯುವುದಕ್ಕೆ ಕೊಡು,” ಎಂದು ಕೇಳಿಕೊಂಡನು.