Genesis 24:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀರನ್ನೆಲ್ಲ ತೊಟ್ಟಿಯಲ್ಲಿ ಸುರಿದು ಮತ್ತೆ ನೀರನ್ನು ತೆಗೆದುಕೊಂಡು ಬರಲು ಬಾವಿಯ ಬಳಿಗೆ ಬೇಗಬೇಗನೆ ಹೋದಳು. ಹೀಗೆ ಅವನ ಒಂಟೆಗಳಿಗೆಲ್ಲಾ ನೀರನ್ನು ಕೊಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.
Kannada BSI Bible 2016
ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ದೋಣಿಯಲ್ಲಿ ಹೊಯ್ದು ತಿರಿಗಿ ತರುವದಕ್ಕೆ ಬಾವಿಯ ಬಳಿಗೆ ಓಡಿ ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ತಂದುಕೊಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೊಡದಲ್ಲಿದ್ದ ನೀರನ್ನು ದೋಣಿಯೊಳಗೆ ಹೊಯಿದು ತಿರಿಗಿ ತರುವದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ತಂದು ಕೊಟ್ಟಳು.
Kannada Bible (KNCL) BSI 2016
ಕೊಡದ ನೀರನ್ನು ತೊಟ್ಟಿಗೆ ಹೊಯ್ದು ಮತ್ತೆ ನೀರು ತರುವುದಕ್ಕೆ ಬಾವಿಗೆ ಓಡಿದಳು. ಹೀಗೆ ಅವನ ಎಲ್ಲ ಒಂಟೆಗಳಿಗೂ ತಂದುಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ತೊಟ್ಟಿಯಲ್ಲಿ ಹೊಯ್ದು, ತಿರುಗಿ ಸೇದುವುದಕ್ಕೆ ಬಾವಿಯ ಬಳಿಗೆ ಓಡಿ, ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ಸೇದಿದಳು.