Genesis 24:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೇವಕನು ಆಕೆಯನ್ನೇ ಗಮನಿಸುತ್ತಾ, ಯೆಹೋವನು ತನ್ನ ಪ್ರಾರ್ಥನೆಗೆ ಉತ್ತರ ಕೊಟ್ಟನೋ ಇಲ್ಲವೋ ಎಂದು ಖಚಿತಪಡಿಸಿಕೊಳ್ಳಲು ಕಾದುಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತನಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ, ಯೆಹೋವನು ತನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವುದಕ್ಕಾಗಿ ಕಾದುಕೊಂಡಿದ್ದನು.
Kannada BSI Bible 2016
ಆಗ ಕರ್ತನು ತನ್ನ ಪ್ರಯಾಣವನ್ನು ಸಫಲಮಾಡಿದನೋ ಇಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ಆ ಮನುಷ್ಯನು ಆಕೆಯ ವಿಷಯವಾಗಿ ಆಶ್ಚರ್ಯ ಪಡುತ್ತಾ ಮೌನವಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಆ ಮನುಷ್ಯನು ಏನೂ ಮಾತಾಡದೆ ಆಕೆಯನ್ನು ದೃಷ್ಟಿಸಿ ನೋಡುತ್ತಾ - ಯೆಹೋವನು ನನ್ನ ಪ್ರಯಾಣವನ್ನು ಸಫಲ ಮಾಡಿದನೋ ಇಲ್ಲವೋ ಎಂದು ತಿಳಿಯುವದಕ್ಕಾಗಿ ಕಾದುಕೊಂಡಿದ್ದನು.
Kannada Bible (KNCL) BSI 2016
ಆ ಮನುಷ್ಯ, ತನ್ನ ಪ್ರಯಾಣವನ್ನು ಸರ್ವೇಶ್ವರ ಸಫಲಗೊಳಿಸಿದರೋ ಇಲ್ಲವೋ ಎಂದು ಯೋಚಿಸುತ್ತಾ ಏನೂ ಮಾತಾಡದೆ ಆಕೆಯನ್ನೇ ದೃಷ್ಟಿಸಿ ನೋಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ತನ್ನ ಪ್ರಯಾಣನ್ನು ಸಫಲ ಮಾಡಿದರೋ ಏನೋ, ಎಂದು ತಿಳಿದುಕೊಳ್ಳುವುದಕ್ಕೆ ಆ ಮನುಷ್ಯನು ಆಕೆಯನ್ನು ಗಮನಿಸುತ್ತಾ, ಆಶ್ಚರ್ಯಪಟ್ಟು ಮೌನವಾಗಿದ್ದನು.