Genesis 24:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂಟೆಗಳು ನೀರನ್ನು ಕುಡಿದಾದ ಮೇಲೆ ಅವನು ರೆಬೆಕ್ಕಳಿಗೆ ಅರ್ಧತೊಲೆಯ ಒಂದು ಚಿನ್ನದ ಉಂಗುರವನ್ನು ಕೊಟ್ಟನು. ಇದಲ್ಲದೆ ಅವನು ಆಕೆಗೆ ಹತ್ತು ತೊಲೆಯ ಎರಡು ಚಿನ್ನದ ಬಳೆಗಳನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂಟೆಗಳು ಕುಡಿದ ನಂತರ ಅವನು ಆಕೆಗೆ ಅರ್ಧ ತೊಲಾ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನು, ಆಕೆಯ ಕೈಗಳಿಗೆ ಹತ್ತು ತೊಲಾ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಕೊಟ್ಟು, “ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.
Kannada BSI Bible 2016
ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂಟೆಗಳು ಕುಡಿದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಆಕೆಯ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ಇಟ್ಟು - ನೀನು ಯಾರ ಮಗಳು? ದಯವಿಟ್ಟು ನನಗೆ ಹೇಳು.
Kannada Bible (KNCL) BSI 2016
ಒಂಟೆಗಳು ಕುಡಿದಾದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ತೊಡಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂಟೆಗಳು ನೀರು ಕುಡಿದಾದ ಮೇಲೆ, ಆ ಮನುಷ್ಯನು ಅರ್ಧ ತೊಲೆಯ ತೂಕದ ಚಿನ್ನದ ಮೂಗುತಿಯನ್ನು, ಹತ್ತು ತೊಲೆ ತೂಕದ ಎರಡು ಬಳೆಗಳನ್ನು ಆಕೆಗೆ ಕೊಟ್ಟನು.