Genesis 24:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸೇವಕನು, “ನಿನ್ನ ತಂದೆ ಯಾರು? ನನ್ನ ಜನರು ಇಳಿದುಕೊಳ್ಳಲು ನಿನ್ನ ತಂದೆಯ ಮನೆಯಲ್ಲಿ ಸ್ಥಳವಿದೆಯೋ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ತಂದೆಯ ಮನೆಯಲ್ಲಿ ನಾವು ಇಳಿದು ಕೊಳ್ಳುವುದಕ್ಕೆ ಸ್ಥಳವಿದೆಯೋ?” ಎಂದು ಕೇಳಲು.
Kannada BSI Bible 2016
ಅವನು--ನೀನು ಯಾರ ಮಗಳು? ನನಗೆ ಹೇಳು; ನಿನ್ನ ತಂದೆಯ ಮನೆಯಲ್ಲಿ ಇಳುಕೊಳ್ಳುವದಕ್ಕೆ ನಮಗೆ ಸ್ಥಳವಿದೆಯೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ತಂದೆಯ ಮನೆಯಲ್ಲಿ ನಾವು ಇಳುಕೊಳ್ಳುವದಕ್ಕೆ ಸ್ಥಳವಿದೆಯೋ ಎಂದು ಕೇಳಲು ಆಕೆ ಅವನಿಗೆ -
Kannada Bible (KNCL) BSI 2016
\ನೀನು ಯಾರ ಮಗಳು? ದಯವಿಟ್ಟು ಹೇಳು; ನಿನ್ನ ತಂದೆಯ ಮನೆಯಲ್ಲಿ ತಂಗುವುದಕ್ಕೆ ಸ್ಥಳವಿದೆಯೇ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ, “ನೀನು ಯಾರ ಮಗಳು? ನನಗೆ ಹೇಳು. ನಿನ್ನ ತಂದೆಯ ಮನೆಯಲ್ಲಿ ಒಂದು ರಾತ್ರಿ ಕಳೆಯುವುದಕ್ಕೆ ನಮಗೆ ಸ್ಥಳವಿದೆಯೋ?” ಕೇಳಿದನು.