Genesis 24:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಲಾಬಾನನು ಅವನಿಗೆ, “ಯೆಹೋವನ ಆಶೀರ್ವಾದ ಹೊಂದಿದವನೇ, ಒಳಗೆ ಬಾ. ನೀನು ಹೊರಗಡೆ ನಿಂತುಕೊಳ್ಳಬೇಕಾಗಿಲ್ಲ. ನೀನು ಇಳಿದುಕೊಳ್ಳುವುದಕ್ಕಾಗಿ ಕೋಣೆಯನ್ನೂ ನಿನ್ನ ಒಂಟೆಗಳಿಗಾಗಿ ಸ್ಥಳವನ್ನೂ ಸಿದ್ಧಪಡಿಸಿದ್ದೇನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ, “ಯೆಹೋವನ ಆಶೀರ್ವಾದವನ್ನು ಹೊಂದಿದವನೇ, ಒಳಗೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯಲ್ಲಿ ಒಂಟೆಗಳಿಗೆ ಬೇಕಾದ ಸ್ಥಳವನ್ನೂ ಸಿದ್ಧಮಾಡಿದ್ದೇನೆ” ಎಂದು ಹೇಳಿದನು.
Kannada BSI Bible 2016
ಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಂದಾಗ ಅವನಿಗೆ - ಯೆಹೋವನ ದಯೆಯನ್ನು ಹೊಂದಿದವನೇ, ಒಳಕ್ಕೆ ಬಾ; ಯಾಕೆ ಹೊರಗೆ ನಿಂತಿರುತ್ತೀ? ನಿನಗೋಸ್ಕರ ನನ್ನ ಮನೆಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಎಂದು ಹೇಳಿದನು.
Kannada Bible (KNCL) BSI 2016
“ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದವನೇ, ಮನೆಗೆ ಬಾ; ಇಲ್ಲಿ ಹೊರಗೇಕೆ ನಿಂತಿರುವೆ? ನಿನಗೆ ಮನೆ ಸಿದ್ಧವಾಗಿದೆ; ಒಂಟೆಗಳಿಗೆ ಬೇಕಾದ ಸ್ಥಳವಿದೆ,” ಎಂದು ಕರೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲಾಬಾನನು ಅವನಿಗೆ, “ಯೆಹೋವ ದೇವರಿಂದ ಆಶೀರ್ವಾದ ಪಡೆದವನೇ, ಒಳಗೆ ಬಾ, ಏಕೆ ಹೊರಗೆ ನಿಂತಿರುವೆ? ನಾನು ಮನೆಯನ್ನೂ, ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ,” ಎಂದನು.