Genesis 24:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅಬ್ರಹಾಮನ ಸೇವಕನು ಲಾಬಾನನ ಮನೆಗೆ ಹೋದನು. ಒಂಟೆಗಳ ಮೇಲಿದ್ದ ಹೊರೆಗಳನ್ನು ಇಳಿಸಲು ಲಾಬಾನನು ಸಹಾಯಮಾಡಿದನು; ಒಂಟೆಗಳಿಗೆ ಸ್ಥಳಮಾಡಿಕೊಟ್ಟು ಮೇವನ್ನು ಕೊಡಿಸಿದನು; ಆಮೇಲೆ ಆ ಸೇವಕನಿಗೆ ಮತ್ತು ಅವನ ಸಂಗಡ ಇದ್ದವರಿಗೆ, ಕಾಲು ತೊಳೆದುಕೊಳ್ಳಲು ನೀರು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನು, ಮೇವನ್ನು ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡ ಇದ್ದವರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಟ್ಟನು.
Kannada BSI Bible 2016
ಆಗ ಆ ಮನುಷ್ಯನು ಮನೆಯೊಳಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಟ್ಟನು. ಅವನಿಗೆ ಅವನ ಸಂಗಡವಿದ್ದವರಿಗೆ ಕಾಲುಗಳನ್ನು ತೊಳೆಯುವದಕ್ಕೆ ನೀರು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮನುಷ್ಯನು ಮನೆಯೊಳಕ್ಕೆ ಬಂದಾಗ ಲಾಬಾನನು ಒಂಟೆಗಳ ಹೊರೆಗಳನ್ನು ಇಳಿಸಿ ಅವುಗಳಿಗೆ ಹುಲ್ಲನ್ನೂ ಮೇವನ್ನೂ ಕೊಡಿಸಿ ಆ ಮನುಷ್ಯನ ಮತ್ತು ಅವನ ಸಂಗಡಿದ್ದವರ ಕಾಲುಗಳನ್ನು ತೊಳೆಯುವದಕ್ಕೆ ನೀರನ್ನು ತರಿಸಿದನು.
Kannada Bible (KNCL) BSI 2016
ಆ ಮನುಷ್ಯ ಮನೆಗೆ ಬಂದಾಗ ಲಾಬಾನನು ಒಂಟೆಗಳ ಹೊರೆಯನ್ನು ಇಳಿಸಿ, ಅವುಗಳಿಗೆ ಹುಲ್ಲು ಮೇವನ್ನು ಕೊಡಿಸಿದನು. ಆ ಮನುಷ್ಯನ ಮತ್ತು ಅವನ ಸಂಗಡಿಗರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ತರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಮನುಷ್ಯನು ಮನೆಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ, ಅವುಗಳಿಗೆ ಹುಲ್ಲನ್ನೂ, ಮೇವನ್ನೂ ಕೊಟ್ಟನು. ಅವನ ಕಾಲುಗಳನ್ನೂ, ಅವನ ಸಂಗಡ ಇದ್ದ ಮನುಷ್ಯರ ಕಾಲುಗಳನ್ನೂ ತೊಳೆಯುವುದಕ್ಕೆ ನೀರನ್ನು ಕೊಟ್ಟನು.