Genesis 24:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನೀನು ನನ್ನ ಸ್ವದೇಶಕ್ಕೆ ಹೋಗಿ ನನ್ನ ಸ್ವಜನರಿಂದಲೇ ನನ್ನ ಮಗನಿಗೆ ಕನ್ಯೆಯನ್ನು ತೆಗೆದುಕೊಳ್ಳಬೇಕು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ, ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.’
Kannada BSI Bible 2016
ಆದರೆ ನೀನು ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳಬೇಕೆಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಮಗನಿಗೆ ಹೆಣ್ಣನ್ನು ತೆಗೆದುಕೊಳ್ಳದೆ ನನ್ನ ತಂದೆಯ ಮನೆಗೂ ನನ್ನ ಬಂಧುಗಳ ಬಳಿಗೂ ಹೋಗಿ ಅವರಲ್ಲೇ ಹೆಣ್ಣನ್ನು ತೆಗೆದುಕೊಳ್ಳಬೇಕೆಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿದನು.
Kannada Bible (KNCL) BSI 2016
ನನ್ನ ತಂದೆಯ ಮನೆಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಹೆಣ್ಣನ್ನು ತರಬೇಕು’ ಎಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ನನ್ನ ತಂದೆಯ ಮನೆಗೂ, ನನ್ನ ಬಂಧುಗಳ ಬಳಿಗೂ ಹೋಗಿ, ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಕೆಂದು,’ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾನೆ.