Genesis 24:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀನು ನನ್ನ ತಂದೆಯ ನಾಡಿಗೆ ಹೋದಾಗ ಅವರು ನನ್ನ ಮಗನಿಗೆ ಒಬ್ಬ ಕನ್ಯೆಯನ್ನು ಕೊಡಲು ಒಪ್ಪದಿದ್ದರೆ ನೀನು ಈ ಪ್ರಮಾಣದಿಂದ ಬಿಡುಗಡೆಯಾಗಿರುವೆ’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಹೋದಾಗ ನನ್ನ ಬಂಧುಗಳಲ್ಲಿ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ” ಎಂದು ಹೇಳಿದನು.
Kannada BSI Bible 2016
ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನೀನು ನನ್ನ ಜನರ ಬಳಿಗೆ ಹೋದಾಗ ಅವರು ಹೆಣ್ಣನ್ನು ಕೊಡದಿದ್ದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ ಎಂದು ಹೇಳಿದನು.
Kannada Bible (KNCL) BSI 2016
ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಬೇಕಾದರೆ - ನೀನು ನನ್ನ ಜನರ ಬಳಿಗೆ ಹೋಗಬೇಕು, ಅವರು ಹೆಣ್ಣನ್ನು ಕೊಡುವುದಿಲ್ಲ ಎನ್ನಬೇಕು. ಆಗ ಮಾತ್ರ ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ;’ ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನ್ನ ಬಂಧುಗಳ ಬಳಿಗೆ ಬಂದಾಗ, ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ,’ ” ಎಂದನು.