Genesis 24:45 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಪ್ರಾರ್ಥನೆ ಮುಗಿಸುವಷ್ಟರಲ್ಲಿ ರೆಬೆಕ್ಕಳು ನೀರಿಗಾಗಿ ಬಾವಿಗೆ ಬಂದಳು. ಆಕೆ ಹೆಗಲ ಮೇಲೆ ಕೊಡವನ್ನು ಹೊತ್ತುಕೊಂಡಿದ್ದಳು. ಆಕೆ ಬಾವಿಗೆ ಹೋಗಿ ನೀರನ್ನು ತೆಗೆದುಕೊಂಡಳು. ನಾನು ಆಕೆಗೆ, ದಯವಿಟ್ಟು ಸ್ವಲ್ಪ ನೀರನ್ನು ಕೊಡು ಎಂದು ಕೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವಾಗಲೇ, ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆನು. ಆಕೆಯು ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಕೇಳಿದೆನು.
Kannada BSI Bible 2016
ನಾನು ನನ್ನ ಹೃದಯದಲ್ಲಿ ಅಂದುಕೊಂಡು ಮುಗಿಸುವದರೊಳಗಾಗಿ ಇಗೋ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟು ಕೊಂಡು ಬಂದಳು. ಆಕೆಯು ಬಾವಿಯಲ್ಲಿ ಇಳಿದು ನೀರನ್ನು ತುಂಬಿಕೊಂಡು ತಂದಾಗ ನಾನು--ನನಗೆ ಕುಡಿಯುವದಕ್ಕೆ ನೀರು ಕೊಡು ಎಂದು ಆಕೆಯನ್ನು ಕೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಹೀಗೆ ಮನಸ್ಸಿನೊಳಗೆ ಮಾತಾಡಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವದನ್ನು ಕಂಡೆನು. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ - ನನಗೆ ನೀರನ್ನು ಕುಡಿಯುವದಕ್ಕೆ ಕೊಡಬೇಕಮ್ಮಾ ಎಂದು ಹೇಳಿದೆನು.
Kannada Bible (KNCL) BSI 2016
ನಾನು ಹೀಗೆ ಮನಸ್ಸಿನಲ್ಲಿ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆ. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡಬೇಕಮ್ಮಾ’ ಎಂದು ಹೇಳಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನನ್ನ ಹೃದಯದಲ್ಲಿ ಹಾಗೆ ಅಂದುಕೊಂಡು ಮುಗಿಸುವುದರೊಳಗಾಗಿ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಹೊರಗೆ ಬಂದಳು. ಆಕೆಯು ಬಾವಿಯಿಂದ ನೀರನ್ನು ಸೇದಿದಳು. ಆಗ ನಾನು, ‘ನನಗೆ ಕುಡಿಯುವುದಕ್ಕೆ ಕೊಡು,’ ಎಂದು ಆಕೆಯನ್ನು ಕೇಳಿದೆನು.