Genesis 24:46 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಕೂಡಲೆ ಆಕೆಯು ಕೊಡವನ್ನು ಹೆಗಲಿನಿಂದ ಕೆಳಗಿಳಿಸಿ, ನನಗೆ ನೀರನ್ನು ಕೊಟ್ಟು, ‘ನೀರನ್ನು ಕುಡಿ; ನಿನ್ನ ಒಂಟೆಗಳಿಗೂ ನೀರನ್ನು ತಂದುಕೊಡುವೆ’ ಎಂದು ಹೇಳಿದಳು. ನಾನು ನೀರನ್ನು ಕುಡಿದ ಮೇಲೆ ಆಕೆ ನನ್ನ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಿರಿ, ನಿಮ್ಮ ಒಂಟೆಗಳಿಗೂ ತಂದು ಕೊಡುತ್ತೇನೆ’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು.
Kannada BSI Bible 2016
ಅದಕ್ಕೆ ಆಕೆಯು ತ್ವರೆಪಟ್ಟು ತನ್ನ ಕೊಡವನ್ನು ಹೆಗಲಿನಿಂದ ಇಳಿಸಿ--ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ಕುಡಿಸುವೆನು ಅಂದಳು. ಆಗ ನಾನು ಕುಡಿದೆನು; ಆಕೆಯು ಒಂಟೆಗ ಳಿಗೂ ಕುಡಿಸಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ತತ್‍ಕ್ಷಣವೇ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ - ಕುಡಿಯಪ್ಪಾ, ನಿನ್ನ ಒಂಟೆಗಳಿಗೂ ತಂದು ಕೊಡುತ್ತೇನೆ ಅಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರು ತಂದುಕೊಟ್ಟಳು.
Kannada Bible (KNCL) BSI 2016
ಕೂಡಲೆ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಪ್ಪಾ, ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ,’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅದಕ್ಕೆ ಆಕೆಯು ತ್ವರೆಪಟ್ಟು, ತನ್ನ ಹೆಗಲಿನ ಮೇಲಿನಿಂದ ಕೊಡವನ್ನು ಇಳಿಸಿ, ‘ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ,’ ಎಂದಳು. ಆಗ ನಾನು ಕುಡಿದೆನು, ಆಕೆಯು ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.