Genesis 24:47 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ನಾನು ಆಕೆಗೆ, ‘ನಿನ್ನ ತಂದೆ ಯಾರು?’ ಎಂದು ಕೇಳಿದೆ, ಆಕೆ ‘ನನ್ನ ತಂದೆಯ ಹೆಸರು ಬೆತೂವೇಲ. ಅವನು ಮಿಲ್ಕಳ ಮತ್ತು ನಾಹೋರನ ಮಗನು’ ಎಂದು ಹೇಳಿದಳು. ಆಗ ನಾನು ಆಕೆಗೆ ಉಂಗುರವನ್ನೂ ಕೈಬಳೆಗಳನ್ನೂ ಕೊಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆಯು, ‘ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು.
Kannada BSI Bible 2016
ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯಾರ ಮಗಳೆಂದು ನಾನು ಕೇಳಿದ್ದಕ್ಕೆ ಆಕೆ - ನಾಹೋರನಿಗೆ ವಿುಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು ಅಂದಳು. ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು
Kannada Bible (KNCL) BSI 2016
ನೀನು ಯಾರ ಮಗಳೆಂದು ಕೇಳಿದ್ದಕ್ಕೆ, 'ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. ಅದನ್ನು ಕೇಳಿ ನಾನು ಆಕೆಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ತೊಡಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಆಕೆಗೆ, ‘ನೀನು ಯಾರ ಮಗಳು?’ ಎಂದು ಕೇಳಿದೆನು. “ಅದಕ್ಕವಳು, ‘ನಾಹೋರನಿಗೆ ಮಿಲ್ಕಾಳು ಹೆತ್ತ ಮಗನಾದ ಬೆತೂಯೇಲನ ಮಗಳು,’ ಎಂದಳು. “ಆಗ ನಾನು ಆಕೆಗೆ ಮೂಗುತಿಯನ್ನೂ, ಆಕೆಯ ಕೈಗಳಿಗೆ ಬಳೆಗಳನ್ನೂ ಕೊಟ್ಟು,