Genesis 24:48 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸಮಯದಲ್ಲಿ ನಾನು ತಲೆಬಾಗಿ ಯೆಹೋವನಿಗೆ ವಂದನೆ ಸಲ್ಲಿಸಿದೆನು. ನನ್ನ ಒಡೆಯನಾದ ಅಬ್ರಹಾಮನ ದೇವರಾದ ಯೆಹೋವನನ್ನು ಸ್ತುತಿಸಿ ಕೊಂಡಾಡಿದೆನು; ಯಾಕೆಂದರೆ ಆತನು ನನ್ನನ್ನು ನನ್ನ ಒಡೆಯನ ತಮ್ಮನ ಮೊಮ್ಮಗಳ ಬಳಿಗೆ ನೇರವಾಗಿ ನಡೆಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಕೇಳಿ ನಾನು ಆಕೆಯ ಮೂಗಿಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ಇಟ್ಟು ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ತಲೆಬಾಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ಸತ್ಯದ ದಾರಿಯಲ್ಲಿ ಕರೆದುಕೊಂಡು ಬಂದುದಕ್ಕಾಗಿ ಆತನನ್ನು ಕೊಂಡಾಡಿದನು.
Kannada BSI Bible 2016
ನನ್ನ ತಲೆಯನ್ನು ಬಾಗಿಸಿ ಕರ್ತನನ್ನು ಆರಾಧಿಸಿ ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿ ಯಾಗಿ ತಕ್ಕೊಳ್ಳುವದಕ್ಕೆ ನನ್ನನ್ನು ಸರಿಯಾದ ಮಾರ್ಗ ದಲ್ಲಿ ನಡಿಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಕರ್ತನನ್ನು ಕೊಂಡಾಡಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ದಣಿಯಾದ ಅಬ್ರಹಾಮನ ದೇವರಾದ ಯೆಹೋವನಿಗೆ ಬೊಗ್ಗಿ ನಮಸ್ಕರಿಸಿ ಆತನು ನನ್ನ ದಣಿಯ ಮಗನಿಗೋಸ್ಕರ ಅವನ ತಮ್ಮನ ಮಗಳನ್ನೇ ತೆಗೆದುಕೊಳ್ಳುವಂತೆ ನನ್ನನ್ನು ನೀಟಾದ ದಾರಿಯಲ್ಲಿ ಕರೆದುಕೊಂಡು ಬಂದದ್ದಕ್ಕಾಗಿ ಆತನನ್ನು ಕೊಂಡಾಡಿದೆನು.
Kannada Bible (KNCL) BSI 2016
ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಲೆಬಾಗಿ ಯೆಹೋವ ದೇವರನ್ನು ಆರಾಧಿಸಿ, ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕೆ ನನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರನ್ನು ಕೊಂಡಾಡಿದೆ.