Genesis 24:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇವಕನು ಅವನಿಗೆ, “ಆ ಕನ್ಯೆಯು ನನ್ನೊಡನೆ ಈ ದೇಶಕ್ಕೆ ಬರಲು ಒಪ್ಪದಿದ್ದರೆ, ನಾನು ನಿನ್ನ ಮಗನನ್ನು ನಿನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಬೇಕೇ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಆ ಸೇವಕನು, “ಒಂದು ವೇಳೆ ನನ್ನೊಡನೆ ಈ ದೇಶಕ್ಕೆ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟು ಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದು ಕೇಳಿದನು.
Kannada BSI Bible 2016
ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಆ ಸೇವಕನು - ಒಂದು ವೇಳೆ ನನ್ನ ಹಿಂದೆ ಈ ದೇಶಕ್ಕೆ ಬರುವದಕ್ಕೆ ಆ ಕನ್ಯೆಗೆ ಇಷ್ಟವಿಲ್ಲದೆ ಹೋದೀತು; ನೀನು ಬಿಟ್ಟುಬಂದ ಆ ದೇಶಕ್ಕೆ ನಾನು ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗಬೇಕನ್ನುತ್ತೀಯೋ ಎಂದು ಕೇಳಲು
Kannada Bible (KNCL) BSI 2016
ಅದಕ್ಕೆ ಆ ಸೇವಕ, “ಒಂದು ವೇಳೆ ಆ ಕನ್ಯೆಗೆ ಈ ನಾಡಿಗೆ ನನ್ನೊಡನೆ ಬರಲು ಇಷ್ಟವಿಲ್ಲದೆ ಹೋದೀತು. ಆಗ, ನೀವು ಬಿಟ್ಟುಬಂದ ನಾಡಿಗೆ ನಿಮ್ಮ ಮಗನನ್ನು ಮರಳಿ ಕರೆದುಕೊಂಡು ಹೋಗಬಹುದೆ?” ಎಂದು ವಿಚಾರಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸೇವಕನು ಅವನಿಗೆ, “ಒಂದು ವೇಳೆ ನನ್ನನ್ನು ಹಿಂಬಾಲಿಸಿ, ಈ ದೇಶಕ್ಕೆ ಬರಲು ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದನು.