Genesis 24:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಬೆಕ್ಕಳು ನಿಮ್ಮವಳು. ನೀನು ಆಕೆಯನ್ನು ಕರೆದುಕೊಂಡು ಹೋಗಿ ಯೆಹೋವನ ಇಷ್ಟಕ್ಕನುಸಾರವಾಗಿ ನಿನ್ನ ಒಡೆಯನ ಮಗನಿಗೆ ಮದುವೆ ಮಾಡಿಸು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ರೆಬೆಕ್ಕಳು ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ” ಎಂದರು.
Kannada BSI Bible 2016
ಇಗೋ, ರೆಬೆಕ್ಕಳು ನಿನ್ನ ಮುಂದೆ ಇದ್ದಾಳೆ. ಆಕೆಯನ್ನು ಕರೆದುಕೊಂಡು ಹೋಗು. ಕರ್ತನು ಹೇಳಿದಂತೆ ಆಕೆಯು ನಿನ್ನ ಯಜಮಾನನ ಮಗನಿಗೆ ಹೆಂಡತಿಯಾಗಿರಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಕರೆದುಕೊಂಡು ಹೋಗಬಹುದು; ಯೆಹೋವನು ಹೇಳಿದಂತೆಯೇ ಆಕೆ ನಿನ್ನ ದಣಿಯ ಮಗನಿಗೆ ಹೆಂಡತಿಯಾಗಲಿ ಅಂದರು.
Kannada Bible (KNCL) BSI 2016
ರೆಬೆಕ್ಕಳನ್ನು ಇಗೋ ನಿನ್ನ ವಶಕ್ಕೆ ಒಪ್ಪಿಸುತ್ತಿದ್ದೇವೆ; ಕರೆದುಕೊಂಡು ಹೋಗಬಹುದು. ಸರ್ವೇಶ್ವರ ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಪತ್ನಿ ಆಗಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಕರೆದುಕೊಂಡು ಹೋಗಬಹುದು; ಯೆಹೋವ ದೇವರು ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಹೆಂಡತಿಯಾಗಲಿ,” ಎಂದರು.