Genesis 24:53 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ಆ ಸೇವಕನು ತಾನು ತಂದಿದ್ದ ಉಡುಗೊರೆಗಳನ್ನು ರೆಬೆಕ್ಕಳಿಗೆ ಕೊಟ್ಟನು. ಅವನು ರೆಬೆಕ್ಕಳಿಗೆ ಬೆಳ್ಳಿಬಂಗಾರಗಳ ಒಡವೆಗಳನ್ನೂ ಶ್ರೇಷ್ಠವಾದ ಬಟ್ಟೆಗಳನ್ನೂ ಕೊಟ್ಟನು. ಇದಲ್ಲದೆ ಅವನು ಬೆಲೆಬಾಳುವ ಉಡುಗೊರೆಗಳನ್ನು ಆಕೆಯ ಅಣ್ಣನಿಗೂ ತಾಯಿಗೂ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.
Kannada BSI Bible 2016
ನಂತರ ಆ ಸೇವಕನು ಬೆಳ್ಳಿ ಬಂಗಾರದ ಒಡವೆ ಗಳನ್ನೂ ವಸ್ತ್ರಗಳನ್ನೂ ತಂದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ ತಾಯಿಗೂ ಅಮೂಲ್ಯ ವಾದ ವಸ್ತುಗಳನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ಉಡುಗೊರೆಗಳನ್ನು ಕೊಟ್ಟನು.
Kannada Bible (KNCL) BSI 2016
ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬೆಳ್ಳಿಯ ಒಡವೆ, ಬಂಗಾರದ ಒಡವೆ, ವಸ್ತ್ರಗಳನ್ನೂ ತಂದು, ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ, ಆಕೆಯ ತಾಯಿಗೂ ಅಮೂಲ್ಯವಾದ ಉಡುಗೊರೆಗಳನ್ನು ಕೊಟ್ಟನು.