Genesis 24:55 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೆಬೆಕ್ಕಳ ತಾಯಿ ಮತ್ತು ಅಣ್ಣನು ಅವರಿಗೆ, “ರೆಬೆಕ್ಕಳು ಸ್ವಲ್ಪ ದಿನಗಳವರೆಗೆ ನಮ್ಮ ಜೊತೆ ಇರಲಿ. ಹತ್ತು ದಿನಗಳವರೆಗಾದರೂ ನಮ್ಮೊಡನೆ ಇರಲಿ. ಆಮೇಲೆ ಆಕೆಯನ್ನು ಕರೆದುಕೊಂಡು ಹೋಗು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಬೆಕ್ಕಳ ಅಣ್ಣನೂ, ತಾಯಿಯೂ ಅವನಿಗೆ, “ಹುಡುಗಿಯು ಇನ್ನು ಹತ್ತು ದಿನವಾದರೂ ನಮ್ಮಲ್ಲಿರಲಿ; ಆ ಮೇಲೆ ಆಕೆ ಹೋಗಬಹುದು” ಎಂದು ಹೇಳಿದರು.
Kannada BSI Bible 2016
ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಬೆಕ್ಕಳ ಅಣ್ಣನೂ ತಾಯಿಯೂ ಅವನಿಗೆ -ಹುಡುಗಿಯು ಇನ್ನು ಎಂಟು ಹತ್ತು ದಿನವಾದರೂ ನಮ್ಮಲ್ಲಿರಲಿ; ಆಮೇಲೆ ಆಕೆ ಹೋಗಬಹುದು ಎಂದು ಹೇಳಿದರು.
Kannada Bible (KNCL) BSI 2016
ಅದಕ್ಕೆ ರೆಬೆಕ್ಕಳ ಅಣ್ಣ ಹಾಗು ತಾಯಿ, “ಹುಡುಗಿ ಇನ್ನೂ ಎಂಟು ಹತ್ತು ದಿನವಾದರೂ ನಮ್ಮಲ್ಲಿರಲಿ; ಆಮೇಲೆ ಆಕೆ ಹೋಗಬಹುದು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆಕೆಯ ಸಹೋದರನೂ, ತಾಯಿಯೂ, “ಹುಡುಗಿಯು ಕೆಲವು ದಿನ ಇರಲಿ. ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇದ್ದು ತರುವಾಯ ಹೋಗಲಿ,” ಎಂದರು.