Genesis 24:59 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಅವರು ರೆಬೆಕ್ಕಳನ್ನು ಅಬ್ರಹಾಮನ ಸೇವಕನೊಂದಿಗೂ ಅವನ ಸಂಗಡಿಗರೊಂದಿಗೂ ಕಳುಹಿಸಿಕೊಟ್ಟರು. ರೆಬೆಕ್ಕಳ ಸೇವಕಿ ಸಹ ಅವರೊಂದಿಗೆ ಹೋದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ, ಅವಳ ದಾಸಿಯರನ್ನು, ಸಂಗಡ ಬಂದ ಅಬ್ರಹಾಮನ ಮನುಷ್ಯರ ಸಂಗಡ ಕಳುಹಿಸಿ ಕೊಟ್ಟರು.
Kannada BSI Bible 2016
ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ - ಹೋಗುತ್ತೇನೆ ಅನ್ನಲು ಅವರು ತಮ್ಮ ತಂಗಿಯಾದ ರೆಬೆಕ್ಕಳನ್ನೂ ಆಕೆಯ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಸಂಗಡ ಬಂದ ಮನುಷ್ಯರನ್ನೂ ಸಾಗಕಳುಹಿಸಿದರು.
Kannada Bible (KNCL) BSI 2016
ಆಗ ಅವರು ತಂಗಿ ರೆಬೆಕ್ಕಳನ್ನೂ ಆಕೆಯ ದಾದಿಯನ್ನೂ ಅಬ್ರಹಾಮನ ಸೇವಕನ ಮತ್ತು ಅವನ ಸಂಗಡಿಗರ ಜೊತೆಗೆ ಸಾಗಕಳುಹಿಸಿದರು, ಅಲ್ಲದೆ ರೆಬೆಕ್ಕಳನ್ನು ಹೀಗೆಂದು ಹರಸಿದರು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಸಾಗಕಳುಹಿಸಿದರು.