Genesis 24:60 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಹೊರಡಲು ಸಿದ್ಧರಾಗಿದ್ದಾಗ ಅವರು ರೆಬೆಕ್ಕಳಿಗೆ, “ನಮ್ಮ ತಂಗಿಯೇ, ನೀನು ಕೋಟ್ಯಾನುಕೋಟಿ ಜನರ ತಾಯಿಯಾಗು. ನಿನ್ನ ಸಂತತಿಗಳವರು ತಮ್ಮ ಶತ್ರುಗಳನ್ನು ಸೋಲಿಸಿ ಅವರ ನಗರಗಳನ್ನು ವಶಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ರೆಬೆಕ್ಕಳಿಗೆ, “ತಂಗಿ, ನಿನ್ನಿಂದ ಸಾವಿರ, ಹತ್ತು ಸಾವಿರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಸ್ವತ್ತನ್ನು ಸ್ವಾಧೀನಮಾಡಿಕೊಳ್ಳಲಿ” ಎಂದು ಹೇಳಿ ಹರಸಿದರು.
Kannada BSI Bible 2016
ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.
Kannada Bible (KNCL) BSI 2016
“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.”