Genesis 24:61 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ರೆಬೆಕ್ಕಳು ಮತ್ತು ಆಕೆಯ ಸೇವಕಿಯರು ಒಂಟೆಯ ಮೇಲೆ ಹತ್ತಿ ಕುಳಿತುಕೊಂಡು ಆ ಸೇವಕನನ್ನೂ ಅವನ ಸಂಗಡಿಗರನ್ನೂ ಹಿಂಬಾಲಿಸಿದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಮನೆಗೆ ಮರಳಿ ಪ್ರಯಾಣಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕರು ರೆಬೆಕ್ಕಳನ್ನು ಕರೆದುಕೊಂಡು ಹೊರಟನು.
Kannada BSI Bible 2016
ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರೆಬೆಕ್ಕಳೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿದವರಾಗಿ ಅಬ್ರಹಾಮನ ಸೇವಕನ ಹಿಂದೆ ಹೋದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೊರಟನು.
Kannada Bible (KNCL) BSI 2016
ರೆಬೆಕ್ಕಳು ಮತ್ತು ಆಕೆಯ ದಾದಿಯರು ಒಂಟೆಗಳ ಮೇಲೆ ಅಬ್ರಹಾಮನ ಸೇವಕನನ್ನು ಹಿಂಬಾಲಿಸಿ ಹೋದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ರೆಬೆಕ್ಕಳೂ, ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ, ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.