Genesis 24:65 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಕೆ, ಆ ಸೇವಕನಿಗೆ, “ನಮ್ಮನ್ನು ಭೇಟಿಯಾಗಲು ಹೊಲದಲ್ಲಿ ಬರುತ್ತಿರುವ ಆ ಯೌವನಸ್ಥನು ಯಾರು?” ಎಂದು ಕೇಳಿದಳು. ಆ ಸೇವಕನು, “ಅವನು ನನ್ನ ಒಡೆಯನ ಮಗನು” ಎಂದು ಹೇಳಿದನು. ಆ ಕೂಡಲೇ ರೆಬೆಕ್ಕಳು ತನ್ನ ಮುಖಕ್ಕೆ ಮುಸುಕನ್ನು ಹಾಕಿಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆಯು ಆ ಸೇವಕನಿಗೆ, “ನಮ್ಮನ್ನು ಎದುರುಗೊಳ್ಳುವುದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರು?” ಎಂದು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕು ಹಾಕಿಕೊಂಡಳು.
Kannada BSI Bible 2016
ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮನ್ನು ಎದುರುಗೊಳ್ಳುವದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರೆಂದು ಆ ಸೇವಕನನ್ನು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕುಹಾಕಿಕೊಂಡಳು.
Kannada Bible (KNCL) BSI 2016
“ನಮ್ಮ ಕಡೆ ಹೊಲದಲ್ಲಿ ನಡೆದು ಬರುತ್ತಿರುವ ಆ ಮನುಷ್ಯ ಯಾರು?” ಎಂದು ಆ ಸೇವಕನನ್ನು ಕೇಳಿದಳು. “ಅವನೇ ನನ್ನೊಡೆಯ” ಎಂದು ಹೇಳಿದಾಗ ಆಕೆ ಮುಸಕುಹಾಕಿಕೊಂಡಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಆ ಸೇವಕನಿಗೆ, “ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು?” ಎಂದಳು. ಅದಕ್ಕೆ ಸೇವಕನು, “ಅವನೇ ನನ್ನ ಯಜಮಾನನು,” ಎಂದಾಗ, ಆಕೆಯು ಮುಸುಕು ಹಾಕಿಕೊಂಡಳು.