Genesis 24:67 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಇಸಾಕನು ಆಕೆಯನ್ನು ಕರೆದುಕೊಂಡು ತನ್ನ ತಾಯಿಯ ಗುಡಾರಕ್ಕೆ ಬಂದನು. ಅಂದು ರೆಬೆಕ್ಕಳು ಇಸಾಕನ ಹೆಂಡತಿಯಾದಳು. ಇಸಾಕನು ಅವಳನ್ನು ಬಹಳವಾಗಿ ಪ್ರೀತಿಸಿದನು. ತಾಯಿಯ ಸಾವಿನಿಂದ ಉಂಟಾಗಿದ್ದ ದುಃಖವು ಕಡಿಮೆಯಾಗಿ ಇಸಾಕನಿಗೆ ಆದರಣೆಯಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ರೀತಿಯಾಗಿ ಇಸಾಕನು ರೆಬೆಕ್ಕಳನ್ನು ವರಿಸಿದನು, ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸಾರಳು ಸತ್ತ ದುಃಖವನ್ನು ಶಮನ ಮಾಡಿಕೊಂಡನು.
Kannada BSI Bible 2016
ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸಾಕನು ಆಕೆಯನ್ನು ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಈ ರೀತಿಯಾಗಿ ಅವನು ರೆಬೆಕ್ಕಳನ್ನು ವರಿಸಿದನು. ಆಕೆ ಅವನ ಹೆಂಡತಿಯಾದಳು. ಅವನು ಆಕೆಯನ್ನು ಪ್ರೀತಿಸಿ ತನ್ನ ತಾಯಿ ಸತ್ತ ದುಃಖವನ್ನು ಶಮನ ಮಾಡಿಕೊಂಡನು.
Kannada Bible (KNCL) BSI 2016
ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಸ್ವೀಕರಿಸಿದನು. ಆಕೆಯು ಅವನ ಹೆಂಡತಿಯಾದಳು, ಅವನು ಆಕೆಯನ್ನು ಪ್ರೀತಿಸಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ದುಃಖ ಶಮನ ಮಾಡಿಕೊಂಡನು.