Genesis 24:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಆ ಕನ್ಯೆಯು ನಿನ್ನೊಡನೆ ಬರಲು ಇಷ್ಟಪಡದಿದ್ದರೆ, ಈ ಪ್ರಮಾಣದಿಂದ ನೀನು ಬಿಡುಗಡೆಯಾಗುವೆ. ಆದರೆ ನೀನು ನನ್ನ ಮಗನನ್ನು ನನ್ನ ಸ್ವದೇಶಕ್ಕೆ ಕರೆದುಕೊಂಡು ಹೋಗಕೂಡದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಆದರೆ ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.
Kannada BSI Bible 2016
ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಇಷ್ಟವಿಲ್ಲದೆ ಹೋದರೆ ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ಹೇಗೂ ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಕೂಡದು ಎಂದು ಹೇಳಿದನು.
Kannada Bible (KNCL) BSI 2016
ಇಲ್ಲಿಗೆ ನಿನ್ನ ಸಂಗಡ ಬರಲು ಆ ಕನ್ಯೆಗೆ ಇಷ್ಟವಿಲ್ಲದೆಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಹೇಗೂ ನನ್ನ ಮಗನನ್ನು ಮರಳಿ ಅಲ್ಲಿಗೆ ಕರೆದುಕೊಂಡು ಹೋಗಕೂಡದು,” ಎಂದು ಮತ್ತೊಮ್ಮೆ ಒತ್ತಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದಿದ್ದರೆ, ನನಗೆ ಮಾಡಿದ ಆ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಆದರೆ ನನ್ನ ಮಗನನ್ನು ಅಲ್ಲಿಗೆ ಮಾತ್ರ ತಿರುಗಿ ಕರೆದುಕೊಂಡು ಹೋಗಬಾರದು,” ಎಂದನು.