Genesis 25:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆ ಬಂಜೆಯಾಗಿರಲಾಗಿ ಇಸಾಕನು ಆಕೆಗೊಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
Kannada BSI Bible 2016
ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಬಂಜೆಯಾಗಿರಲಾಗಿ ಅವನು ಆಕೆಗೋಸ್ಕರ ಯೆಹೋವನನ್ನು ಬೇಡಿಕೊಂಡನು. ಯೆಹೋವನು ಅವನ ವಿಜ್ಞಾಪನೆಯನ್ನು ಲಾಲಿಸಿದ್ದರಿಂದ ರೆಬೆಕ್ಕಳು ಬಸುರಾದಳು.
Kannada Bible (KNCL) BSI 2016
ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಆಕೆಯು ಬಂಜೆಯಾಗಿದ್ದುದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವ ದೇವರನ್ನು ಬೇಡಿಕೊಂಡನು. ಯೆಹೋವ ದೇವರು ಅವನ ಬೇಡಿಕೆಯನ್ನು ಪೂರೈಸಿದರು. ಆದ್ದರಿಂದ ಅವನ ಹೆಂಡತಿ ರೆಬೆಕ್ಕಳು ಗರ್ಭಿಣಿಯಾದಳು.