Genesis 25:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ “ಯಾಕೋಬ” ಎಂದು ಹೆಸರಿಟ್ಟರು. ಇವರಿಬ್ಬರು ಹುಟ್ಟಿದಾಗ ಇಸಾಕನು ಅರುವತ್ತು ವರ್ಷದವನಾಗಿದ್ದನು.
Kannada BSI Bible 2016
ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡನೆಯ ಶಿಶುವು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಾಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
Kannada Bible (KNCL) BSI 2016
ಎರಡನೆಯ ಮಗು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹೊರಗೆ ಬಂದನು. ಅವನಿಗೆ, ಯಾಕೋಬ, ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರವತ್ತು ವರ್ಷದವನಾಗಿದ್ದನು.