Genesis 25:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.
Kannada BSI Bible 2016
ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು.
Kannada Bible (KNCL) BSI 2016
ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು.