Genesis 25:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತುಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಸಾವನು, “ಆಗಲಿ” ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.
Kannada BSI Bible 2016
ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗಲಿ, ನನ್ನಂಥ ಸಾಯುವವನಿಗೆ ಚೊಚ್ಚಲತನದಿಂದ ಪ್ರಯೋಜನವೇನು ಅಂದನು.
Kannada Bible (KNCL) BSI 2016
ಏಸಾವನು, ‘ಆಗಲಿ, ಮಾರುತ್ತೇನೆ, ಸಾಯುತ್ತಿರುವ ನನಗೆ ಜ್ಯೇಷ್ಠತನದಿಂದ ಪ್ರಯೋನಜವೇನು? ಎಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಸಾವನು, “ಇಗೋ, ನಾನು ಸಾಯುತ್ತಿದ್ದೇನೆ, ಜೇಷ್ಠ ಪುತ್ರನ ಹಕ್ಕಿನಿಂದ ನನಗೇನು ಲಾಭ?” ಎಂದನು.