Genesis 25:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.
Kannada BSI Bible 2016
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಎದ್ದುಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿದನು.
Kannada Bible (KNCL) BSI 2016
ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ, ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಅವನು ತಿಂದು, ಕುಡಿದು ಎದ್ದು ಹೋದನು. ಹೀಗೆ ಏಸಾವನು ತನ್ನ ಜೇಷ್ಠ ಪುತ್ರನ ಹಕ್ಕನ್ನು ತಾತ್ಸಾರದಿಂದ ಕಂಡನು.