Genesis 25:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಮಕ್ಕಳಾದ ಇಸಾಕ್, ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂಮಿಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನನ್ನು ಸಮಾಧಿಮಾಡಿದರು. ಅದು ಮಮ್ರೆಯ ತೋಪಿನ ಪೂರ್ವದಿಕ್ಕಿನಲ್ಲಿದೆ.
Kannada BSI Bible 2016
ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಮಕ್ಕಳಾದ ಇಸಾಕ್ ಇಷ್ಮಾಯೇಲರು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಭೂವಿುಯಲ್ಲಿರುವ ಮಕ್ಪೇಲದ ಗವಿಯಲ್ಲಿ ಅವನಿಗೆ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿರುವದು;
Kannada Bible (KNCL) BSI 2016
ಅವನ ಮಕ್ಕಳಾದ ಇಸಾಕ್ - ಇಷ್ಮಾಯೇಲರು ಅವನನ್ನು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿದ್ದ ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಪುತ್ರರಾದ ಇಸಾಕನೂ, ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಳಿಟ್ಟರು.