Genesis 26:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬೀಮೆಲೆಕನು ಅವನಿಗೆ, “ನೀನು ನಮಗೆ ಕೆಟ್ಟದ್ದನ್ನು ಮಾಡಿದೆ. ನಮ್ಮಲ್ಲಿರುವ ಯಾವ ಗಂಡಸಾದರೂ ನಿನ್ನ ಹೆಂಡತಿಯೊಡನೆ ಮಲಗಿಕೊಳ್ಳಲು ನೀನೇ ಆಸ್ಪದ ಮಾಡಿಕೊಟ್ಟಿದ್ದೆ. ಅಂಥದ್ದೇನಾದರೂ ನಡೆದಿದ್ದರೆ ಮಹಾ ಅಪರಾಧವಾಗುತ್ತಿತ್ತು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಯಾಕೆ ಮಾಡಿದೆ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಸಂಗಮಿಸುವುದಕ್ಕೆ ಆಸ್ಪದವಾಗುತ್ತಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ?”
Kannada BSI Bible 2016
ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅಬೀಮೆಲೆಕನು - ನೀನು ನಮಗೆ ಹೀಗೆ ಯಾಕೆ ಮಾಡಿದಿ? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯೊಡನೆ ಕೂಡುವದಕ್ಕೆ ಆಸ್ಪದವಾಗಿತ್ತು. ನಿನ್ನ ಮೂಲಕ ನಮಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲಾ ಎಂದು ಹೇಳಿ ತನ್ನ ಪ್ರಜೆಗಳಿಗೆ -
Kannada Bible (KNCL) BSI 2016
ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಮಾಡಬಹುದೆ? ನಮ್ಮಲ್ಲಿ ಯಾರಾದರೊಬ್ಬನು ನಿನ್ನ ಹೆಂಡತಿಯನ್ನು ಕೂಡಿರಬಹುದಿತ್ತಲ್ಲವೆ? ಆಗ ನಿನ್ನಿಂದ ನನಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲವೆ?” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬೀಮೆಲೆಕನು, “ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯನ್ನು ತೆಗೆದುಕೊಂಡಿದ್ದರೆ, ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ,” ಎಂದನು.