Genesis 26:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಯಾರೂ ಕೇಡುಮಾಡಕೂಡದು. ಇವರಿಗೆ ಕೇಡುಮಾಡುವವನನ್ನು ಕೊಲ್ಲಲಾಗುವುದು” ಎಂದು ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂದು ಹೇಳಿ ಅಬೀಮೆಲೆಕನು ತನ್ನ ಪ್ರಜೆಗಳಿಗೆ, “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣ ದಂಡನೆಯಾಗುವುದು” ಎಂದು ಆಜ್ಞೆ ಮಾಡಿದನು.
Kannada BSI Bible 2016
ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣದಂಡನೆಯಾಗುವದು ಎಂದು ಆಜ್ಞೆಮಾಡಿದನು.
Kannada Bible (KNCL) BSI 2016
ಬಳಿಕ ತನ್ನ ಪ್ರಜೆಗಳಿಗೆ ಈ ಆಜ್ಞೆಯನ್ನು ಹೊರಡಿಸಿದನು. “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ಮರಣದಂಡನೆ ತಪ್ಪದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬೀಮೆಲೆಕನು ತನ್ನ ಜನರಿಗೆಲ್ಲಾ, “ಈ ಮನುಷ್ಯನನ್ನಾಗಲಿ, ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು,” ಎಂದು ಅಪ್ಪಣೆಕೊಟ್ಟನು.