Genesis 26:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
Kannada BSI Bible 2016
ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
Kannada Bible (KNCL) BSI 2016
ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.