Genesis 26:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನಿಗೆ ಅನೇಕ ದನಕುರಿಗಳ ಮಂದೆಗಳೂ ಪ್ರಾಣಿಗಳ ಹಿಂಡೂಗಳೂ ಇದ್ದವು. ಇದಲ್ಲದೆ ಅವನಿಗೆ ಅನೇಕ ಸೇವಕರು ಇದ್ದರು. ಇದನ್ನು ಕಂಡು ಫಿಲಿಷ್ಟಿಯರು ಅವನ ಬಗ್ಗೆ ಅಸೂಯೆಪಡುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ದನಕುರಿಗಳೂ, ಸಂಪತ್ತೂ, ಸೇವಕರು ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
Kannada BSI Bible 2016
ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ದನಕುರಿಗಳ ಸಂಪತ್ತೂ ಅನೇಕ ಸೇವಕಜನವೂ ಇದ್ದವು. ಇದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
Kannada Bible (KNCL) BSI 2016
ಅವನಿಗೆ ದನಕುರಿಗಳೂ ಆಳುಕಾಳುಗಳೂ ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡುಗಳೂ ಬಹಳ ಮಂದಿ ಸೇವಕರೂ ಇದ್ದರು. ಆದ್ದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು.