Genesis 26:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತುಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದ್ದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿಸಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವುಗಳಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
Kannada BSI Bible 2016
ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ತಿರಿಗಿ ತೆಗಿಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
Kannada Bible (KNCL) BSI 2016
ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ಮರಳಿ ತೆಗೆಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಇಸಾಕನು ತನ್ನ ತಂದೆ ಅಬ್ರಹಾಮನ ದಿನಗಳಲ್ಲಿ ಅಗೆದಂಥ ಬಾವಿಗಳನ್ನು ತಿರುಗಿ ಅಗೆದನು. ಏಕೆಂದರೆ ಅಬ್ರಹಾಮನು ಮರಣದ ನಂತರ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರುಕೊಟ್ಟನು.