Genesis 26:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಇಸಾಕನಿಗೆ ಪ್ರತ್ಯಕ್ಷನಾಗಿ, “ನೀನು ಈಜಿಪ್ಟಿಗೆ ಹೋಗಬೇಡ. ನೀನು ಯಾವ ಪ್ರದೇಶದಲ್ಲಿರಬೇಕೆಂದು ನಾನು ಆಜ್ಞಾಪಿಸಿದೆನೋ ಆ ಪ್ರದೇಶದಲ್ಲಿ ವಾಸಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಯೆಹೋವನು ಇಸಾಕನಿಗೆ ದರ್ಶನಕೊಟ್ಟು, “ನೀನು ಐಗುಪ್ತ ದೇಶಕ್ಕೆ ಇಳಿದು ಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.
Kannada BSI Bible 2016
ಆಗ ಕರ್ತನು ಅವನಿಗೆ ಕಾಣಿಸಿಕೊಂಡು--ಐಗುಪ್ತಕ್ಕೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಯೆಹೋವನು ಅವನಿಗೆ ದರ್ಶನಕೊಟ್ಟು - ನೀನು ಐಗುಪ್ತದೇಶಕ್ಕೆ ಇಳಿದುಹೋಗಬೇಡ; ನಾನು ಹೇಳುವ ದೇಶದಲ್ಲಿ ನೀನು ವಾಸಮಾಡಬೇಕು.
Kannada Bible (KNCL) BSI 2016
ಅಲ್ಲಿ ಸರ್ವೇಶ್ವರ ಸ್ವಾಮಿ ಇಸಾಕನಿಗೆ ದರ್ಶನ ಕೊಟ್ಟು ಇಂತೆಂದರು: “ನೀನು ಈಜಿಪ್ಟಿಗೆ ಹೋಗಬೇಡ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ಈಜಿಪ್ಟಿಗೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.