Genesis 26:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಗೆರಾರಿನ ಕಣಿವೆಯಲ್ಲಿ ಕುರಿಕಾಯುತ್ತಿದ್ದ ಜನರು ಇಸಾಕನ ಸೇವಕರೊಡನೆ ವಾದಮಾಡಿ, “ಈ ನೀರು ನಮ್ಮದು” ಎಂದು ಹೇಳಿದರು. ಆದ್ದರಿಂದ ಇಸಾಕನು ಆ ಬಾವಿಗೆ ‘ಏಸೆಕ್’ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ ಏಸೆಕ್” ಎಂದು ಹೆಸರಿಟ್ಟನು.
Kannada BSI Bible 2016
ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್‌ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
Kannada Bible (KNCL) BSI 2016
ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದರು. ಆದುದರಿಂದ ಇಸಾಕನು ಆ ಬಾವಿಗೆ “ಏಸೆಕ್\ ಎಂದು ಹೆಸರಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗೆರಾರಿನ ಮಂದೆಯನ್ನು ಮೇಯಿಸುವವರು, “ಈ ನೀರು ನಮ್ಮದು,” ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ, ಏಸೆಕ್, ಎಂದು ಹೆಸರಿಟ್ಟನು.