Genesis 26:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಮೇಲೆ ಇಸಾಕನ ಸೇವಕರು ಮತ್ತೊಂದು ಬಾವಿಯನ್ನು ತೋಡಿದರು. ಅಲ್ಲಿಯ ಜನರೂ ಆ ಬಾವಿಗಾಗಿ ವಾದಮಾಡಿದರು. ಆದ್ದರಿಂದ ಇಸಾಕನು ಆ ಬಾವಿಗೆ ‘ಸಿಟ್ನಾ’ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ ಸಿಟ್ನಾ” ಎಂದು ಹೆಸರಿಟ್ಟನು.
Kannada BSI Bible 2016
ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
Kannada Bible (KNCL) BSI 2016
ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದರು. ಆ ನಾಡಿಗರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅದಕ್ಕೆ ‘ಸಿಟ್ನಾ’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಅವರು ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿಯೂ ಅವರು ಜಗಳವಾಡಿದಾಗ, ಅವನು ಅದಕ್ಕೆ, ಸಿಟ್ನಾ, ಎಂದು ಹೆಸರಿಟ್ಟನು.