Genesis 26:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸಾಕನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ತೋಡಿಸಿದನು. ಆ ಬಾವಿಯ ಕುರಿತು ವಾದಮಾಡಲು ಯಾರೂ ಬರಲಿಲ್ಲ. ಆದ್ದರಿಂದ ಇಸಾಕನು, “ಈಗ ಯೆಹೋವನು ನಮಗೋಸ್ಕರ ಒಂದು ಸ್ಥಳವನ್ನು ತೋರಿಸಿದ್ದಾನೆ. ನಾವು ಈ ಸ್ಥಳದಲ್ಲಿ ಅಭಿವೃದ್ಧಿಯಾಗೋಣ” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ ರೆಹೋಬೋತ್” ಎಂದು ಹೆಸರಿಟ್ಟನು.
Kannada BSI Bible 2016
ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್‌ ಎಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನು ಅಗೆಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದದರಿಂದ ಅವನು - ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದಾನಾದದರಿಂದ ಅಭಿವೃದ್ಧಿಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.
Kannada Bible (KNCL) BSI 2016
ಅವನು ಅಲ್ಲಿಂದ ಮುಂದಕ್ಕೆ ತೆರಳಿ ಮತ್ತೊಂದು ಬಾವಿಯನ್ನು ಅಗೆಸಿದನು. ಅದರ ಬಗ್ಗೆ ಯಾರೂ ಜಗಳಕ್ಕೆ ಬರಲಿಲ್ಲ. ಈ ಕಾರಣ ಅವನು, “ಸರ್ವೇಶ್ವರ ನಮಗೀಗ ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ; ನಾವು ಅಭಿವೃದ್ಧಿಯಾಗುತ್ತೇವೆ,” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು, “ಈಗ ಯೆಹೋವ ದೇವರು ನಮಗೆ ಸ್ಥಳವನ್ನು ಮಾಡಿದ್ದಾರೆ. ನಾವು ಈ ದೇಶದಲ್ಲಿ ಅಭಿವೃದ್ಧಿ ಹೊಂದುವೆವು,” ಎಂದು ಹೇಳಿ ಅದಕ್ಕೆ, ರೆಹೋಬೋತ್, ಎಂದು ಹೆಸರಿಟ್ಟನು.