Genesis 26:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಅವನಿಗೆ, “ನಿನ್ನ ಜೊತೆಯಲ್ಲಿ ಯೆಹೋವನು ಇದ್ದಾನೆಂಬುದು ಈಗ ನಮಗೆ ತಿಳಿಯಿತು. ನಾವು ಒಂದು ಒಪ್ಪಂದ ಮಾಡಿಕೊಳ್ಳಬೇಕೆಂಬುದು ನಮ್ಮ ಆಲೋಚನೆ. ನೀನು ನಮಗೆ ಒಂದು ಪ್ರಮಾಣ ಮಾಡಬೇಕಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡು ಬಂದುದರಿಂದ ನೀನೂ, ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
Kannada BSI Bible 2016
ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ನಿನ್ನ ಸಂಗಡ ಇದ್ದಾನೆ ಎಂದು ನಮಗೆ ಸ್ಪಷ್ಟವಾಗಿ ಕಂಡುಬಂದದರಿಂದ ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾಗಿ ಒಡಂಬಡಿಕೆ ಮಾಡಿಕೊಳ್ಳೋಣವೆಂದು ಆಲೋಚಿಸಿದೆವು.
Kannada Bible (KNCL) BSI 2016
ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು, “ನಿಶ್ಚಯವಾಗಿ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ ಎಂದು ತಿಳಿದು, ನಮಗೂ, ನಿನಗೂ ಮಧ್ಯದಲ್ಲಿ ಒಂದು ಪ್ರಮಾಣವಿರುವ ಹಾಗೆ, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳೋಣವೆಂದು ನಾವು ತೀರ್ಮಾನಿಸಿದ್ದೇವೆ.