Genesis 26:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ನಿನಗೆ ಕೇಡುಮಾಡಲಿಲ್ಲ. ಅದೇ ರೀತಿಯಲ್ಲಿ ಈಗ ನೀನೂ ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣಮಾಡಬೇಕು. ನಾವು ನಿನ್ನನ್ನು ದೂರ ಕಳುಹಿಸಿದರೂ ಸಮಾಧಾನದಿಂದ ಕಳುಹಿಸಿಕೊಟ್ಟೆವು. ಯೆಹೋವನು ನಿನ್ನನ್ನು ಆಶೀರ್ವದಿಸಿದ್ದಾನೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದೆವಲ್ಲಾ. ಅದರಂತೆ ನೀನು ನಮಗೆ ಕೇಡನ್ನು ಮಾಡುವುದಿಲ್ಲವೆಂಬುದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಲ್ಲವೇ” ಎಂದು ಹೇಳಿದರು.
Kannada BSI Bible 2016
ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ನಿನಗೆ ಯಾವ ಕೇಡನ್ನೂ ಮಾಡದೆ ಹಿತವನ್ನೇ ಮಾಡಿ ನಿನ್ನನ್ನು ಸಮಾಧಾನದೊಡನೆ ಕಳುಹಿಸಿದೆವಲ್ಲಾ; ಅದರಂತೆ ನೀನು ನಮಗೆ ಕೇಡನ್ನು ಮಾಡುವದಿಲ್ಲವೆಂಬದಾಗಿ ಪ್ರಮಾಣಮಾಡಬೇಕು. ನೀನು ಈಗ ಯೆಹೋವನ ದಯೆಯನ್ನು ಹೊಂದಿದವನಾಗಿದ್ದೀಯಷ್ಟೆ ಎಂದು ಹೇಳಿದರು.
Kannada Bible (KNCL) BSI 2016
ನಾವು ನಿನಗೆ ಯಾವ ಕೇಡನ್ನು ಮಾಡದೆ ಒಳ್ಳೆಯದನ್ನೇ ಮಾಡಿ ಸಮಾಧಾನದಿಂದ ಕಳುಹಿಸಿಕೊಟ್ಟಿಲ್ಲವೆ? ಅದರಂತೆಯೆ ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದ ನೀನು ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣ ಮಾಡಬೇಕು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇನೆಂದರೆ, ನಾವು ನಿನ್ನನ್ನು ಮುಟ್ಟದೆ, ನಿನಗೆ ಒಳ್ಳೆಯದನ್ನೇ ಮಾಡಿ, ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು. ಏಕೆಂದರೆ ನೀನು ಈಗ ಯೆಹೋವ ದೇವರಿಂದ ಆಶೀರ್ವಾದ ಹೊಂದಿರುವೆ,” ಎಂದರು.