Genesis 26:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ ಮುಂಜಾನೆ, ಅವರು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡು, ಸಮಾಧಾನದಿಂದ ಹೊರಟುಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.
Kannada BSI Bible 2016
ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಇಸಾಕನು ಅವರನ್ನು ಸಾಗಕಳುಹಿಸಲು ಅವರು ಸಮಾಧಾನದೊಡನೆ ಹೊರಟುಹೋದರು.
Kannada Bible (KNCL) BSI 2016
ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಇಸಾಕನು ಅವರನ್ನು ಬೀಳ್ಕೊಡಲು ಅವರು ಸಮಾಧಾನದಿಂದ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಅನಂತರ ಇಸಾಕನು ಅವರನ್ನು ಸಾಗಕಳುಹಿಸಿದನು. ಅವರು ಸಮಾಧಾನದಿಂದ ಹೊರಟು ಹೋದರು.