Genesis 26:7 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸಾಕನ ಹೆಂಡತಿಯಾದ ರೆಬೆಕ್ಕಳು ತುಂಬ ಸೌಂದರ್ಯವತಿಯಾಗಿದ್ದಳು. ಆ ಸ್ಥಳದ ಗಂಡಸರು ರೆಬೆಕ್ಕಳ ಬಗ್ಗೆ ಇಸಾಕನನ್ನು ಕೇಳಿದರು. ಇಸಾಕನು ಅವರಿಗೆ, “ಆಕೆ ನನ್ನ ತಂಗಿ” ಎಂದು ಹೇಳಿದನು. ರೆಬೆಕ್ಕಳು ತನಗೆ ಹೆಂಡತಿಯಾಗಬೇಕೆಂದು ಅವರಿಗೆ ತಿಳಿದರೆ ಆಕೆಯನ್ನು ತೆಗೆದುಕೊಳ್ಳಲು ಅವರು ತನ್ನನ್ನು ಕೊಲ್ಲಬಹುದೆಂಬ ಹೆದರಿಕೆಯಿಂದ ಇಸಾಕನು ಹಾಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಸ್ಥಳದ ಜನರು ಅವನ ಹೆಂಡತಿಯನ್ನು ನೋಡಿ ಆಕೆಯನ್ನು ಕುರಿತು ವಿಚಾರಿಸಿದಾಗ ಅವನು ರೆಬೆಕ್ಕಳು ಸುಂದರಿಯಾಗಿರುವುದರಿಂದ ಈ ಸ್ಥಳದ ಜನರು ಈಕೆಯ ನಿಮಿತ್ತ ನನ್ನನ್ನು ಕೊಂದಾರು ಅಂದುಕೊಂಡು ಆಕೆಯನ್ನು ತನ್ನ ಹೆಂಡತಿ ಎಂದು ಹೇಳುವುದಕ್ಕೆ ಭಯಪಟ್ಟು ತಂಗಿಯಾಗಬೇಕು ಎಂದು ಹೇಳಿದನು.
Kannada BSI Bible 2016
ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
Kannada Bible (KNCL) BSI 2016
ಅಲ್ಲಿಯ ಜನರು ಅವನ ಹೆಂಡತಿಯ ವಿಷಯವಾಗಿ ವಿಚಾರಿಸಿದರು. “ಅವಳು ನನ್ನ ತಂಗಿ”, ಎಂದು ಇಸಾಕನು ಹೇಳಿದನು. ರೆಬೆಕ್ಕಳು ಬಲು ಚೆಲುವೆಯಾಗಿದ್ದರಿಂದ ಆಕೆಯ ನಿಮಿತ್ತ ತನ್ನನ್ನು ಕೊಂದಾರು ಎಂದು ಹೆದರಿ ಹಾಗೆ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.