Genesis 26:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಇಸಾಕನು ಇದ್ದು ಬಹುಕಾಲವಾಗಿತ್ತು. ಒಮ್ಮೆ ಫಿಲಿಷ್ಟಿಯರ ರಾಜನಾದ ಅಬೀಮೆಲೆಕನು ತನ್ನ ಕಿಟಕಿಯಿಂದ ನೋಡಿದಾಗ, ಇಸಾಕನು ಮತ್ತು ಅವನ ಹೆಂಡತಿ ಸರಸವಾಡುತ್ತಿರುವುದನ್ನು ಕಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಆ ಸ್ಥಳದಲ್ಲಿ ಬಹಳ ದಿನ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಿಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.
Kannada BSI Bible 2016
ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಆ ಸ್ಥಳದಲ್ಲಿ ಬಹಳ ದಿವಸ ಇದ್ದ ಮೇಲೆ ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುವದನ್ನು ಕಂಡನು.
Kannada Bible (KNCL) BSI 2016
ಅವನು, ಆ ಸ್ಥಳದಲ್ಲಿ ಬಹಳ ದಿವಸ ತಂಗಿದ್ದನು. ಒಂದು ದಿನ ಫಿಲಿಷ್ಟಿಯ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ, ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡುತ್ತಿದ್ದಾಗ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸಮಾಡುವುದನ್ನು ಕಂಡನು.