Genesis 27:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇಸಾಕನು ಮುದುಕನಾದಾಗ ಅವನಿಗೆ ಕಣ್ಣುಗಳು ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಒಂದು ದಿನ ಅವನು ತನ್ನ ಹಿರಿಮಗನಾದ ಏಸಾವನನ್ನು ತನ್ನ ಬಳಿಗೆ ಕರೆದು ಅವನಿಗೆ, “ಮಗನೇ” ಅಂದನು. ಏಸಾವನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನು ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ಅವನು ತನ್ನ ಹಿರೀಮಗನಾದ ಏಸಾವನನ್ನು ಕರೆದು, “ಮಗನೇ” ಎನ್ನಲು ಏಸಾವನು, “ಇಗೋ ಇದ್ದೇನೆ” ಅಂದನು.
Kannada BSI Bible 2016
ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮೊಬ್ಬಾಗಿರಲು ತನ್ನ ಹಿರೀ ಮಗನಾದ ಏಸಾವನನ್ನು ಕರೆದು - ಮಗನೇ ಅನ್ನಲು ಏಸಾವನು - ಇದ್ದೇನೆ ಅಂದನು.
Kannada Bible (KNCL) BSI 2016
ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮಬ್ಬಾಯಿತು. ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು, \ಮಗನೇ,” ಎನ್ನಲು ಏಸಾವನು, “ಇಗೋ, ಇಲ್ಲೇ ಇದ್ದೇನೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸಾಕನು ಮುದುಕನಾಗಿ ನೋಡುವುದಕ್ಕಾಗದಷ್ಟು ಅವನ ಕಣ್ಣುಗಳು ಮಬ್ಬಾದಾಗ, ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು ಅವನಿಗೆ, “ನನ್ನ ಮಗನೇ,” ಎಂದನು. ಅವನು ಇಸಾಕನಿಗೆ, “ಇದ್ದೇನೆ,” ಎಂದನು.