Genesis 27:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕೆ ರೆಬೆಕ್ಕಳು ಅವನಿಗೆ, “ಅವನು ನಿನಗೆ ಶಾಪಕೊಟ್ಟರೆ, ಆ ಶಾಪವು ನನಗಾಗಲಿ. ನಾನು ಹೇಳಿದಂತೆ ಮಾಡು. ನನಗೋಸ್ಕರ ಆಡುಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
Kannada BSI Bible 2016
ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ತಾಯಿ - ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆ ಮರಿಗಳನ್ನು ತೆಗೆದುಕೊಂಡು ಬಾ ಎಂದು ಹೇಳಲು
Kannada Bible (KNCL) BSI 2016
ಆಗ ಅವನ ತಾಯಿ, “ಮಗನೇ, ಅವರು ನಿನಗೆ ಶಾಪ ಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆ ಮರಿಗಳನ್ನು ತೆಗೆದುಕೊಂಡು ಬಾ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತಾಯಿಯು ಅವನಿಗೆ, “ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ, ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ, ಅವುಗಳನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು.