Genesis 27:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೋಬನು ತನ್ನ ತಂದೆಗೆ, “ನಾನು ಏಸಾವ, ನಿನ್ನ ಮೊದಲನೆ ಮಗ. ನೀನು ಹೇಳಿದಂತೆ ನಾನು ಮಾಡಿಕೊಂಡು ಬಂದಿದ್ದೇನೆ. ನಾನು ನಿನಗೋಸ್ಕರ ಬೇಟೆಯಾಡಿದ ಪ್ರಾಣಿಯ ಮಾಂಸವನ್ನು ಕುಳಿತುಕೊಂಡು ತಿನ್ನು. ಅನಂತರ ನೀನು ನನ್ನನ್ನು ಆಶೀರ್ವದಿಸಬಹುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನು ಅವನಿಗೆ, “ನಾನು ನಿನ್ನ ಹಿರೀಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಊಟ ಸಿದ್ಧಪಡಿಸಿಕೊಂಡು ತಂದಿದ್ದೇನೆ. ಎದ್ದು, ಕುಳಿತುಕೊಂಡು ನಾನು ತಂದಿರುವ ಬೇಟೆ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು” ಎಂದು ಹೇಳಲು,
Kannada BSI Bible 2016
ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬನು ಅವನಿಗೆ - ನಾನು ನಿನ್ನ ಹಿರೀ ಮಗನಾದ ಏಸಾವನು; ನಿನ್ನ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕೂತುಕೊಂಡು ನಾನು ತಂದಿರುವ ಬೇಟೇ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸು ಎಂದು ಹೇಳಲು ಇಸಾಕನು -
Kannada Bible (KNCL) BSI 2016
ಯಕೋಬನು, “ನಾನೇ ನಿಮ್ಮ ಹಿರಿಯ ಮಗ ಏಸಾವನು; ನಿಮ್ಮ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕುಳಿತುಕೊಂಡು ನಾನು ತಂದಿರುವ ಬೇಟೆಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಕೋಬನು ತನ್ನ ತಂದೆಗೆ, “ನಾನು ನಿನ್ನ ಹಿರಿಯ ಮಗ ಏಸಾವನು. ನೀನು ನನಗೆ ಹೇಳಿದಂತೆ ಮಾಡಿದ್ದೇನೆ, ಎದ್ದು ಕುಳಿತುಕೋ. ನೀನು ನನ್ನನ್ನು ಆಶೀರ್ವದಿಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.