Genesis 27:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಇಸಾಕನು ಯಾಕೋಬನಿಗೆ, “ನನ್ನ ಬಳಿಗೆ ಬಾ, ನನ್ನ ಮಗನನ್ನು ನಾನು ಮುಟ್ಟಿ ತಿಳಿದುಕೊಳ್ಳಬಲ್ಲೆ. ನಾನು ನಿನ್ನನ್ನು ಮುಟ್ಟಿದರೆ, ನೀನು ನಿಜವಾಗಿಯೂ ನನ್ನ ಮಗನಾದ ಏಸಾವನೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಬಲ್ಲೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸಾಕನು ಯಾಕೋಬನಿಗೆ, “ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳಿದುಕೊಳ್ಳಬೇಕು” ಎಂದು ಹೇಳಿದನು.
Kannada BSI Bible 2016
ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಂದಾ, ನನ್ನ ಬಳಿಗೆ ಬಾ; ನೀನು ನನ್ನ ಮಗನಾದ ಏಸಾವನೋ ಅಲ್ಲವೋ ನಿನ್ನನ್ನು ಮುಟ್ಟಿ ತಿಳುಕೊಳ್ಳಬೇಕು ಎಂದು ಹೇಳಿದನು.
Kannada Bible (KNCL) BSI 2016
ಆಗ ಇಸಾಕನು ಅವನಿಗೆ, “ಮಗನೇ, ಹತ್ತಿರಕ್ಕೆ ಬಾ; ನೀನು ನನ್ನ ಮಗನೋ ಅಲ್ಲವೋ, ಎಂದು ಮುಟ್ಟಿ ತಿಳಿದುಕೊಳ್ಳಬೇಕು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಸಾಕನು ಯಾಕೋಬನಿಗೆ, “ನನ್ನ ಮಗನೇ, ನೀನೇ ನನ್ನ ಮಗ ಏಸಾವನು ಹೌದೋ, ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿನೋಡುವಂತೆ ಹತ್ತಿರ ಬಾ,” ಎಂದನು.